ಉಡುಪಿ ಡಿಸೆಂಬರ್ 16: ಮಗುವನ್ನು ಎತ್ತಿಕೊಂಡು ಬಾವಿಯ ನೀರನ್ನು ಸೇದುತ್ತಿರುವ ವೇಳೆ ಮಗು ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.

ಮೃತ ಮಗುವನ್ನು ಒಂದೂವರೆ ವರ್ಷದ ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information