LATEST NEWS
ಕೋರ್ಟ್ ಆವರಣದಲ್ಲಿ ಗಾಂಜಾ ಮಾರಾಟ- ಓರ್ವನ ಬಂಧನ
ಕೋರ್ಟ್ ಆವರಣದಲ್ಲಿ ಗಾಂಜಾ ಮಾರಾಟ- ಓರ್ವನ ಬಂಧನ
ಮಂಗಳೂರು ಜೂನ್ 07 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆದಿದ್ದು, ಇದು ಯಾವ ಮಟ್ಟಕ್ಕೆ ತಲುಪಿದೇ ಎಂದರೇ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಾಂಜಾ ಮಾರಾಟ ಮಾಡುವ ಹಂತಕ್ಕೆ ತಲುಪಿದೆ. ಶಾಲಾ, ಕಾಲೇಜು ಹಾಸ್ಟೇಲ್ ಗಳಲ್ಲಿ ಮಾರಾಟವಾಗುತ್ತಿದ್ದ ಗಾಂಜಾ ಈಗ ನೇರ ಕೋರ್ಟ್ ಆವರಣದಲ್ಲಿ ಬಂದು ನಿಂತಿದೆ.
ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಬಂದರು ಠಾಣೆಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮಂಗಳೂರು ಹೊರವಲಯದ ಆಂಮ್ಲಮೊಗರು ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಬಂಧಿತ ಸಂದೀಪ್ ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಬರುವ ವಿಚಾರಣಾಧೀನ ಕೈದಿಗಳಿಗೆ ಗಾಂಜಾ ಮಾರಾಟಮಾಡುತ್ತಿದ್ದ ಎಂದು ಹೇಳಲಾಗಿದೆ.
ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಕಾರಾಗೃಹಗಳಿಂದ ಪೊಲೀಸರು ಕರೆತರುವ ವಿಚಾರಣಾಧೀನ ಕೈದಿಗಳಿಗೆ ಸಂದೀಪ್ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಬಂದರು ಠಾಣೆಯ ಪೊಲೀಸರು ದಾಳಿ ನಡೆಸಿ ಸಂದೀಪ್ ನನ್ನು ಬಂಧಿಸಿದ್ದಾರೆ. ಬಂದಿತನಿಂದ 38 ಪ್ಯಾಕೆಟ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈ ಗಾಂಜಾ ಮಾರಾಟ ಜಾಲದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಶಾಮೀಲಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿದ್ದು. ಈ ಬಗ್ಗೆ ತನಿಖೆ ನಡೆಸಬೇಕಾದ ಅಗತ್ಯ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.