Connect with us

  LATEST NEWS

  ಮಂಗಳೂರಿನಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ದಾಳಿ ಒರ್ವನ ಸಾವು

  ಮಂಗಳೂರಿನಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ದಾಳಿ ಒರ್ವನ ಸಾವು

  ಮಂಗಳೂರು ಸೆಪ್ಟೆಂಬರ್ 26: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ನಡೆದ ದಾಳಿಯಲ್ಲಿ ಒರ್ವ ಸಾವನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

  ಮಂಗಳೂರಿನ ಅಡ್ಯಾರು ಎಂಬಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕರಿಬ್ಬರು ಮೇಲೆ ದಾಳಿ ನಡೆಸಿದ್ದಾರೆ. ದಾಳಿಗೊಳಗಾದವರು ಜಿಯಾ ಮತ್ತು ಫಝಲ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಜಿಯಾ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
  ಘಟನೆಯ ವಿವರ :

  ಜಿಯಾ ಮತ್ತು ಫಝಲ್ ಕಾರಿನಲ್ಲಿ ತೆರಳುತ್ತಿದ್ದಾಗ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಜಿಯಾ ಗಂಭೀರವಾಗಿ ಗಾಯೊಗೊಂಡಿದ್ದಾರೆ. ಮತ್ತು ದುಷ್ಕರ್ಮಿಗಳು ಫಝಲ್ ಅವರ ಕೈಯನ್ನು ಕಡಿದಿದ್ದಾರೆ.

  ದುಷ್ಕರ್ಮಿಗಳು ಇನ್ನೊವಾ ಕಾರಿನಲ್ಲಿ ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಗೆ ಹಳೆ ದ್ವೇಷವೆ ಕಾರಣ ಎಂದು ಹೇಳಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

  ಗಂಭೀರವಾಗಿ ಗಾಯಗೊಂಡಿದ್ದ ಜಿಯಾ ಸಾವನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply