BANTWAL
ಶಾಮಿಯಾನ ಹಾಕುತಿದ್ದ ವೇಳೆ ಕರೆಂಟ್ ಶಾಕ್ , ಬಂಟ್ವಾಳದಲ್ಲಿ ಓರ್ವ ಮೃತ್ಯು,ನಾಲ್ವರು ಗಾಯ
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ.
ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕದ ಸಲುವಾಗಿ ಈ ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದಾನೆ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸುತ್ತಿದ್ದಾರೆ.