LATEST NEWS
ಮಂಗಳೂರು – ನಿಫಾ ವೈರಸ್ ಶಂಕೆ..ಸ್ವಇಚ್ಛೆಯಿಂದ ಪರೀಕ್ಷೆ ಮಾಡಿಸಿಕೊಂಡ ಗೋವಾದಿಂದ ಮಂಗಳೂರಿಗೆ ಬಂದಿಳಿದ ವ್ಯಕ್ತಿ
ಮಂಗಳೂರು: ಕೇರಳದಲ್ಲಿ ಭಾರಿ ಆತಂಕ ಸೃಷ್ಠಿಸಿರುವ ನಿಫಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆಯ ಎಂಬ ಅನುಮಾನ ಕಾಡಲಾರಂಭಿಸಿದ್ದು, ನಿಫಾ ಸೋಂಕಿನ ಶಂಕೆಯಲ್ಲಿ ಗೋವಾ ಮೂಲದ ವ್ಯಕ್ತಿಯೊಬ್ಬರನ್ನು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಪಡಿಸಿದ ಘಟನೆ ನಡೆದಿದೆ.
ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ ಆರ್ಟಿ-ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖನಾಗಿದ್ದ ಈತ, ನಿಫಾ ವೈರಸ್ ಬಂದಿರಬಹುದೆಂಬ ಶಂಕೆ ಹಿನ್ನೆಲೆ ಟೆಸ್ಟ್ ಮಾಡಿಸಿದ್ದಾನೆ.
ಈತ ಗೋವಾದಿಂದ ಕಾರವಾರಕ್ಕೆ ಬಂದು, ಅಲ್ಲಿಂದ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಮಂಗಳೂರಿಗೆ ಬಂದಿದ್ದಾನೆ. ಈತನ ಮಾದರಿ ಪಡೆದಿರುವ ಆರೋಗ್ಯ ಇಲಾಖೆ ಪರೀಕ್ಷೆಗೆ ಕಳಿಸಿದ್ದು, ಇಂದು ಅಥವಾ ನಾಳೆ ರಿಪೋರ್ಟ್ ಬರಲಿದೆ. ಆತನನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಈತನ ವರದಿಯು ಸೆ.15 ರಂದು ಬರುವ ಸಾಧ್ಯತೆಯಿದೆ. ಕೇರಳದಲ್ಲಿ ಭಾರೀ ಆತಂಕ ಮೂಡಿಸಿರುವ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಅವರಲ್ಲಿ ರೋಗದ ಯಾವುದೇ ಗುಣಲಕ್ಷಣ ಇರಲಿಲ್ಲ. ಆ ವ್ಯಕ್ತಿಯ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೇನು ರಿಪೋರ್ಟ್ ಬರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.