Connect with us

MANGALORE

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್…

ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಬುಧವಾರ ರಾತ್ರಿಯಿಂದಲೇ ಲಾಕ್ ಡೌನ್ ಆರಂಭವಾಗಲಿದ್ದು,  ಜುಲೈ 22 ವರೆಗೆ ಒಂದು ವಾರದ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗುವುದು.

ಎಲ್ಲಾ ರಾಜಕೀಯ ಪಕ್ಷಗಳು, ಸಂಘಟನೆಗಳು ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಮಾಡಿರುವುದನ್ನು ಪರಿಗಣಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ನಡುವೆ ದಕ್ಷಿಣಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮುಖ್ಯಮಂತ್ರಿಯವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಳಿನ್ ಕುಮಾರ್ ಕಟೀಲ್ ಈ ಮನವಿಯನ್ನು ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಚಾರವಾಗಿ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ಕೈಗೊಳ್ಳಲಿ ಎನ್ನುವ ಸೂಚನೆಯನ್ನು ನೀಡಿದ್ದಾರೆ.

Facebook Comments

comments