LATEST NEWS
ಕಾರ್ಕಳ ಕಾಂಗ್ರೇಸ್ ನಲ್ಲಿ ಭುಗಿಲೆದ್ದ ಅಸಮಧಾನ ಕಾರ್ಯಕರ್ತನಿಂದ ಆತ್ಮಹತ್ಯೆಗೆ ಯತ್ನ
ಕಾರ್ಕಳ ಕಾಂಗ್ರೇಸ್ ನಲ್ಲಿ ಭುಗಿಲೆದ್ದ ಅಸಮಧಾನ ಕಾರ್ಯಕರ್ತನಿಂದ ಆತ್ಮಹತ್ಯೆಗೆ ಯತ್ನ
ಉಡುಪಿ ಎಪ್ರಿಲ್ 17: ಕಾರ್ಕಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರ ಬೆಂಬಲಿಗನೋರ್ವ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮುನಿಯಾಲು ಉದಯಕುಮಾರ್ ಶೆಟ್ಟಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡದೆ ಕಾಂಗ್ರೇಸ್ ಗೋಪಾಲ್ ಭಂಡಾರಿ ಅವರಿಗೆ ಟಿಕೆಟ್ ನೀಡಿತ್ತು. ಈ ಹಿನ್ನಲೆಯಲ್ಲಿ ನಿನ್ನೆಯೂ ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.
ಇಂದು ಕೂಡ ಹೆಬ್ರಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿ ಮುಂದೆ ಸೇರಿದ ಉದಯಕುಮಾರ್ ಶೆಟ್ಡಿ ಬೆಂಬಲಿಗರು ಕಾಂಗ್ರೇಸ್ ಹಿರಿಯ ನಾಯಕರ ವಿರುದ್ದ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಸಂದರ್ಭ ಆಸಿಫ್ ಎಂಬ ಕಾರ್ಯಕರ್ತ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ನೆರೆದಿದ್ದ ಕಾರ್ಯಕರ್ತರು ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ.
You must be logged in to post a comment Login