KARNATAKA
ಆನ್ ಲೈನ್ ಗೇಮ್ ಹುಚ್ಚಿಗೆ ಬಲಿಯಾದ ಯುವಕ

ಶಿರಸಿ ಜುಲೈ 02: ಆನ್ ಲೈನ್ ಗೆಮ್ ಚಟದಿಂದ ಬರೋಬ್ಬರಿ 65 ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜೇತ್ ಶಾಂತಾರಾಮ ಹೆಗಡೆ (37) ಎಂದು ಗುರುತಿಸಲಾಗಿದೆ.
ಯುವಕ ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್‍ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.
ಇನ್ನು ವಿಜೇತ್ ಸುಮಾರು 65 ಲಕ್ಷ ರೂ. ಗೂ ಹೆಚ್ಚಿನ ಹಣವನ್ನು ಆನ್ ಲೈನ್ ಗೇಮ್‍ನಲ್ಲಿ ಕಳೆದುಕೊಂಡಿದ್ದ ಎಂದು ವರದಿಯಾಗಿದ್ದು, ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
