Connect with us

LATEST NEWS

ಅಪರೇಷನ್ ರೈಸಿಂಗ್ ಲಯನ್ – ಇರಾನ್ ಮೇಲೆ ಇಸ್ರೇಲ್ ದಾಳಿ IRGCಯ ಮುಖ್ಯಸ್ಥ ಹೊಸೈನ್ ಸಲಾಮಿ ಹತ್ಯೆ

ಟೆಹ್ರಾನ್‌ ಜೂನ್ 13: ಅಮೇರಿಕಾ ಮತ್ತು ಇಸ್ರೇಲ್ ನ ಎಚ್ಚರಿಕೆ ನಡುವೆ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಮುಂದಾಗಿರುವ ಇರಾನ್ ಮೇಲೆ ಇದೀಗ ಇಸ್ರೇಲ್ ಮುಗಿ ಬಿದ್ದಿದೆ. ಅಪರೇಷನ್ ರೈಸಿಂಗ್ ಲಯನ್ ಎಂಬ ಹೆಸರಿನಲ್ಲಿ ನಡೆದ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.


ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಫೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಸಹ ಇಸ್ರೇಲ್ ಸೇನೆ ಹೇಳಿದೆ.

ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಟೆಹ್ರಾನ್ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ಈ ದಾಳಿಯು ಇರಾನ್ ಮಿಲಿಟರಿ ಶ್ರೇಣಿಯಲ್ಲಿನ ಹಲವಾರು ಹಿರಿಯ ಅಧಿಕಾರಿಗಳನ್ನು ಬಲಿ ಪಡೆದಿದೆ ಎಂದು ಇಸ್ರೇಲಿ ಅಧಿಕಾರಿಗಳು ಅಂದಾಜಿಸಿದ್ದಾರೆ. ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಟೆಹ್ರಾನ್ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ.
ಇದರಿಂದಾಗಿ ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.

Share Information
Continue Reading
Advertisement
2 Comments

2 Comments

    Leave a Reply

    Your email address will not be published. Required fields are marked *