KARNATAKA
ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ವ್ಯಾಪಾರಕ್ಕೆ ಅವಕಾಶ: ಸಿ.ಎಂ. ಇಬ್ರಾಹಿಂ
ಹುಮನಾಬಾದ್, ಮೇ 08: ‘ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.
‘ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು ₹ 60–70 ಸಾವಿರ ನೀಡಿ ಹಸುಗಳನ್ನು ತಂದರೆ ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ. ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು’ ಎಂದರು.