MANGALORE
ಜೂನ್ 11 ಮತ್ತು 12 ರಂದು ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಂಗಳೂರು ಜೂನ್ 10: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಈಗಾಗಲೇ ಕರಾವಳಿಗೆ ಮುಂಗಾರು ಮಳೆ ಪ್ರವೇಶಿಸಿದ್ದರೂ ಇಲ್ಲಿಯವರೆಗೆ ಉತ್ತಮ ಮಳೆಯಾಗಿಲ್ಲ. ಈಗ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಜೂನ್ 11 ಮತ್ತು 12 ರಂದು ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.
ಅಲ್ಲದೆ 11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ 12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಭಾರಿ ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದೆ.
You must be logged in to post a comment Login