Connect with us

UDUPI

ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ ಉಡುಪಿಯಲ್ಲಿ ಆರೆಂಜ್ ಅಲರ್ಟ್

ಮಂಗಳೂರು ಜೂನ್ 27: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ  ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ನ್ನು ಘೋಷಿಸಲಾಗಿದೆ. ಜಿಲ್ಲೆಯಲ್ಲಿ 100 ರಿಂದ 115ಮಿ.ಮೀ. ಮಳೆ ಸುರಿಯುವ ಸಾಧ್ಯತೆ ಇದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಜಿಲ್ಲೆಯ ಜನತೆಗೆ ಕೆಲ ಸೂಚನೆಗಳನ್ನು ನೀಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಸಾರ್ವಜನಿಕರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳದಲ್ಲಿರುವ ಸೂಚಿಸಲಾಗಿದೆ. ಅಲ್ಲದೇ ಜಿಲ್ಲೆಯ ಸಾರ್ವಜನಿಕರು ತುರ್ತು ಸೇವೆಗೆ ಶುಲ್ಕರಹಿತ 1077 ಹಾಗೂ ದೂರವಾಣಿ ಸಂಖ್ಯೆ: 0820-2574802ನ್ನು ಸಂಪರ್ಕಿಸು ವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Facebook Comments

comments