LATEST NEWS
ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯವರೇ ಆರೋಪಿಗಳು – ಐವನ್ ಡಿಸೋಜಾ

ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯವರೇ ಆರೋಪಿಗಳು – ಐವನ್ ಡಿಸೋಜಾ
ಮಂಗಳೂರು ಏಪ್ರಿಲ್ 24: ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿಯವರೇ ಆರೋಪಿಗಳು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟೀಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ 12 ವರ್ಷಕ್ಕಿಂತ ಕೆಳ ವಯಸ್ಸಿನ ಮಕ್ಕಳ ಮೇಲೆ ನಡೆದ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ ನೀಡಲು ಕ್ರಮ ತೆಗೆದುಕೊಂಡಿದೆ, ಆದರೆ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳ ಗತಿ ಏನು ಎಂದು ಅವರು ಪ್ರಶ್ನಿಸಿದರು. ಅತ್ಯಾಚಾರಕ್ಕೆ ವಯಸ್ಸಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷದಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ದೊಡ್ಡ ಪಟ್ಟಿಯೇ ಇದೆ ಇವರ ಮೇಲೆ ಬಿಜೆಪಿ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು.

ಬಿಜೆಪಿಯ ‘ನಮ್ಮ ಬಿಜೆಪಿ, ನಮ್ಮ ಮನೆ ‘ ಅಭಿಯಾನದ ಮೂಲಕ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದು, ಬಿಜೆಪಿಯವರು ಯಾವುದೇ ಮನೆಯನ್ನು ಬಿಜೆಪಿ ಮನೆ ಎಂದು ಹೇಳುವಂತಿಲ್ಲ ಎಂದರು. ಈ ಕುರಿತಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.