Connect with us

KARNATAKA

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ, 6 ಮಂದಿ ರೋಗಿಗಳಿಗೆ ಅಂಗಾಂಗ ದಾನ

ಉಡುಪಿ, ಎಪ್ರಿಲ್ 06: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ  ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ.

ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾಗಿದ್ದು, ಈ ಮೂಲಕ ಶ್ರೀನಿವಾಸ್ ಅವರು ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಏಪ್ರಿಲ್ 2ರಂದು ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಬಳಿ ಸಂಜೆ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಈ ರಸ್ತೆ ಅಪಘಾತದಲ್ಲಿ ಸಾಲಿಗ್ರಾಮ ನಿವಾಸಿಯಾದ ಶ್ರೀನಿವಾಸ್ ಅವರಿಗೆ ಅಪಘಾತವಾಗಿ ಗಂಭೀರ ಗಾಯವಾಗಿತ್ತು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.

ಶ್ರೀನಿವಾಸ್ ಅವರನ್ನು ರಕ್ಷಿಸಲು ವೈದ್ಯರ ತಂಡ ಎಷ್ಟೇ ಪ್ರಯತ್ನ ಪಟ್ಟರೂ ಅದು ಸಾಧ್ಯವಾಗಿಲ್ಲ. ಚೇತರಿಸಿಕೊಳ್ಳುವಂತಹ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಶ್ರೀನಿವಾಸ್ ಅವರ ಜೀವ ಉಳಿಸಲು ಪ್ರಯತ್ನಪಟ್ಟರೂ ಅದು ಸಾಧ್ಯವಾಗಿಲ್ಲ. 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಣೆ ಮಾಡಿತು.

ಈ ವೇಳೆ ಶ್ರೀನಿವಾಸ್ ಅವರ ತಂದೆ ರಾಜು ನಾಯರಿಯವರು ಕಾರ್ಯ ಸಾಧ್ಯವಾಗುವ ತಮ್ಮ ಮಗನ ಅಂಗಾಂಗಗಳನ್ನು ದಾನ ಮಾಡುವ ಇಚ್ಚೆಯನ್ನು ವೈದ್ಯರಲ್ಲಿ ವ್ಯಕ್ತಪಡಿಸಿದರು.ಜೀವನ ಸಾರ್ಥಕತೆ ಪ್ರೋಟೋಕಾಲ್‌ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಎರಡು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಅನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ್ ತಂದೆ ‘ಅಂಗ ದಾನ ಒಂದು ಪುಣ್ಯದ ಕೆಲಸ. ನನ್ನ ಮಗನ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ’ ಎಂದಿದ್ದಾರೆ.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಮಾತನಾಡಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು” ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀನಿವಾಸ್ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *