LATEST NEWS
ಯೋಗ ಮಾಡುವ ವೇಳೆ ಜಾರಿ ಬಿದ್ದ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್…ಆಸ್ಪತ್ರೆಗೆ ದಾಖಲು
ಮಂಗಳೂರು: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ಮಾಡುತ್ತಿರುವ ಸಂದರ್ಭ ಜಾರಿ ಬಿದ್ದಿದ್ದುಸ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನ ಅತ್ತಾವರದಲ್ಲಿರುವ ಪ್ಲ್ಯಾಟ್ ನಲ್ಲಿ ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್ಗೆಂದು ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು.
ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
You must be logged in to post a comment Login