LATEST NEWS
ಕಿಡ್ನಿ ಸೊಂಕು ಹಿನ್ನಲೆ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲು
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಂಗಳೂರು ಜೂನ್ 10: ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
79 ವರ್ಷ ಪ್ರಾಯದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜೂನ್ 8 ರಂದು ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮನಮೋಹನ್ ಸಿಂಗ್ ಅವರ ಮೊದಲ ಅವಧಿಯ ಸರಕಾರದಲ್ಲಿ ಕೇಂದ್ರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಉತ್ತಮ ಹಿಡಿತ ಹೊಂದಿರುವ ಆಸ್ಕರ್ ಫರ್ನಾಂಡಿಸ್ ಅವರು ಸದ್ಯ ರಾಜ್ಯಸಭಾ ಸಂಸದರಾಗಿದ್ದಾರೆ.