Connect with us

    BELTHANGADI

    ಲಾಡ್ಜ್ ಬುಕ್ಕಿಂಗ್ ಗಾಗಿ ಬಂದ ಅನ್ಯಕೋಮಿನ ಜೋಡಿ: ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    ಧರ್ಮಸ್ಥಳ, ಆಗಸ್ಟ್ 12: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಾಪಿನ ಬಾಗಿಲು ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

    ಗದಗ ಮೂಲದ ರಫೀಕ್(21), ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್ ಗೆ (ವಸತಿಗೃಹ) ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ. ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನಲಾಗಿದೆ.

    ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದ್ದು, ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply