Connect with us

LATEST NEWS

ಉಡುಪಿ ಭಾರೀ ಮಳೆಗೆ ಒತ್ತಿನೇಣೆ ಬಳಿ ಗುಡ್ಡಕುಸಿತ

ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೇಣೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ.


ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನಲೆ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಬಿದ್ದು, ಸ್ವಲ್ವ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ರಸ್ತೆ ಕಾಮಗಾರಿ ವಹಿಸಿಕೊಂಡಿರುವ ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.


ಪ್ರತಿವರ್ಷ ಮಳೆಗಾಲದ ಸಂದರ್ಭ ಒತ್ತಿನೇಣೆಯ ಪರಿಸರದಲ್ಲಿ ಗುಡ್ಡಿ ಕುಸಿತದ ಘಟನೆಗಳು ನಡೆಯುತ್ತಲೇ ಇದೆ.

Advertisement
Click to comment

You must be logged in to post a comment Login

Leave a Reply