Connect with us

    LATEST NEWS

    ಲೋಕಸಭಾ ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿಯಾದರೂ ನಮ್ಮ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ – ಸಂಸದೆ ಶೋಭಾ ಕರಂದ್ಲಾಜೆ

    ಲೋಕಸಭಾ ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿಯಾದರೂ ನಮ್ಮ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ – ಸಂಸದೆ ಶೋಭಾ ಕರಂದ್ಲಾಜೆ

    ಕುಂದಾಪುರ ಮಾರ್ಚ್ 20: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾಗಿ ನಿಂತರೂ ನಮ್ಮ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅಷ್ಟೇ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

    ಅವರು ಕುಂದಾಪುರದಲ್ಲಿ ಆಯೋಜಿಸಲಾದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ. ಹೈಕಮಾಂಡ್ ನಿಂದ ಈ ಕುರಿತಂತೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದರು.

    ಈ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಮೋದಿಯೇ ಅಭ್ಯರ್ಥಿ ಎನ್ನುವ ಅಂಶವನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಷ್ಟೇ ನಮ್ಮ ಗುರಿಯಾಗಬೇಕು ಎಂದು ಹೇಳಿದರು.

    ಮೋದಿ ಅವರನ್ನು ನಮ್ಮ ಅಭ್ಯರ್ಥಿಯನ್ನಾಗಿಸಿ ಆ ಮೂಲಕ ನಮ್ಮ ಕ್ಷೇತ್ರದ ಅಭ್ಯರ್ಥಿಯನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು. ಅದಕ್ಕಾಗಿ ಮೋದಿಯವರನ್ನೇ ಮುಂದೆ ತರಬೇಕು ಮತ್ತು ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಸ್ಪಷ್ಟಪಡಿಸುವ ಕೆಲಸ ಮಾಡಬೇಕು ಎಂದರು.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply