Connect with us

KARNATAKA

ಜಲಾಶಯದ ಗೋಡೆ ಹತ್ತಲು ಹೋಗಿ ಬಿದ್ದ ಯುವಕ – ವಿಡಿಯೋ ವೈರಲ್

ಚಿಕ್ಕಬಳ್ಳಾಪುರ : ತುಂಬಿ ತುಳುಕುತ್ತಿದ್ದ ಜಲಾಶಯದ ಗೋಡೆಯನ್ನು ಏರಲು ಹೋಗಿ ಯುವಕನೊಬ್ಬ ಕೆಳಗೆ ಬಿದ್ದು ಗಾಯ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.


ರಾಜ್ಯದಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿದೆ. ಇದೇ ರೀತಿ ಶ್ರೀನಿವಾಸ ಸಾಗರ ಜಲಾಶಯ ಈಗ ತುಂಬಿದೆ. ಕೋಡಿ ಹರಿಯುತ್ತಿದೆ. ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಇಲ್ಲಿಗೆ ಜನರು ಭೇಟಿ ನೀಡುತ್ತಾರೆ. ಆದರೆ ನೀರಿನಲ್ಲಿ ಆಟಕ್ಕೆ ಬರುವವರ ‘ಹುಚ್ಚಾಟ’ಗಳು ಸಹ ಹೆಚ್ಚಿವೆ.

ಶ್ರೀನಿವಾಸ ಸಾಗರದ ಕೋಡಿಯ ತಡೆಗೋಡೆಯ ಮೇಲೆ ಏರಲು ಯುವಕರು ತಾ ಮುಂದು ನಾ ಮುಂದು ಎಂದು ಮುಗಿ ಬೀಳುತ್ತಿದ್ದಾರೆ. ಭಾನುವಾರ ಹೀಗೆ ತಡೆಗೋಡೆಯ ಮೇಲೆ ಹತ್ತಿದ ಯುವಕನೊಬ್ಬ ಏಕಾಏಕಿ ಬಿದ್ದಿದ್ದಾನೆ. ಆದರೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತ ಗೌರಿಬಿದನೂರು ತಾಲ್ಲೂಕು ಮೂಲದವರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply