LATEST NEWS
ಮಲ್ಲಪ್ಪುರಂ – ಪುಟ್ಬಾಲ್ ಪಂದ್ಯದ ವೇಳೆ ಪಟಾಕಿ ಸಿಡಿತ – 30ಕ್ಕೂ ಅಧಿಕ ಮಂದಿಗೆ ಗಾಯ

ಮಲಪ್ಪುರಂ ಫೆಬ್ರವರಿ 19:ಪುಟ್ಬಾಲ್ ಪಂದ್ಯದ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿಗಳು ತಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕೇರಳದ ಮಲ್ಲಪುರಂ ಜಿಲ್ಲೆಯ ಅರೀಕೋಡ್ ನಡೆದಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ್ದಾರೆ. ಪರಿಣಾಮ ಪಟಾಕಿ ಕಿಡಿ ಮೈದಾನದಲ್ಲಿ ಹರಡಿ, ಪಂದ್ಯ ವೀಕ್ಷಿಸಲು ಕುಳಿತಿದ್ದ ಜನರ ಮೇಲೆ ಹಾರಿದೆ. ಇದರಿಂದ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪಟಾಕಿ ಸಿಡಿದ ದೃಶ್ಯಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
