Connect with us

LATEST NEWS

ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋ ಪಲ್ಟಿ…!!

ಕಟಪಾಡಿ ಎಪ್ರಿಲ್ 17: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋವೊಂದು ಪಲ್ಟಿಯಾಗಿರುವ ಘಟನೆ ಇಂದು ನಡೆದಿದೆ.


ಬ್ರಹ್ಮಾವರದತ್ತ ತೆರುಳುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಟೆಂಪೋದಲ್ಲಿದ್ದ ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ಪ್ರಾಣಹಾನಿಯಿಂದ ಪಾರಾಗಿದ್ದಾರೆ. ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.