Connect with us

DAKSHINA KANNADA

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಮಂಗಳೂರು, ಮೇ 08: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿ. ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕೆಲಸಕ್ಕಾಗಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಮದ್ಯ ವ್ಯಸನದಿಂದ ಸಂಭವಿಸಿದ ಗಂಡನ ಸಾವಿನ ಬಳಿಕ ಧೃತಿಗೆಡದ ಸುಕ್ರಜ್ಜಿ 1990 ರ ದಶಕದಲ್ಲಿ ಮದ್ಯ ವಿರೋಧಿ ಆಂದೋಲನವನ್ನು ನಡೆಸಿದ್ದರು.

Advertisement
Click to comment

You must be logged in to post a comment Login

Leave a Reply