ಶ್ರೀನಗರ ಎಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು ಬಿಡುಗಡೆಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಈ ಕೃತ್ಯದಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಮೂಲದ ಮೂವರನ್ನು ಆಸೀಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಲಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬದುಕುಳಿದವರ ಸಹಾಯದಿಂದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಈ ಮೂವರು ಮೂಸಾ, ಯೂನಸ್ ಹಾಗೂ ಆಸೀಫ್ ಎಂಬ ಹೆಸರುಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತಯಬಾ ಬೆಂಬಲಿತ ಉಗ್ರ ಸಂಘಟನೆಯಾದ ರೆಸಿಸ್ಟನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತಿದೆ.