LATEST NEWS
ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಕಾರು ಅಪಘಾತ..ಪ್ರಾಣಾಪಾಯದಿಂದ ಪಾರು

ಲಾಹೋರ್ : ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಪತಿ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಕಿಸ್ತಾನದ ಮಾಜಿ ಕಪ್ತಾನ ಶೋಯೆಬ್ ಮಲ್ಲಿಕ್ ನಿನ್ನೆ ಲಾಹೋರ್ ನ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಸಭೆಯೊಂದರಲ್ಲಿ ಭಾಗವಹಿಸಿ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಸ್ಥಳೀಯರ ಮಾಹಿತಿ ಪ್ರಕರಾ ಶೋಯೆಬ್ ಮಲ್ಲಿಕ್ ಅವರು ಸ್ಪೋರ್ಟ್ ಕಾರನ್ನು ಅತಿ ವೇಗವಾಗಿ ಚಲಾಯಿಸಿದ್ದು, ಈ ಸಂದರ್ಭ ನಿಯಂತ್ರಣ ತಪ್ಪಿ ಎದುರಿಗೆ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಮಲಿಕ್ ಅವರ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶೋಯಿಬ್ ಮಲಿಕ್ ಸಣ್ಣ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತಂತೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಷಯವನ್ನು ಬಹಿರಂಗಪಡಿಸಿದ ಮಲಿಕ್, “ದೇವರ ಅನುಗ್ರಹದಿಂದ. ಅವರು ಸುರಕ್ಷಿತವಾಗಿದ್ದೆನೆ ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಅಭಿಮಾನಿಗಳು ಮತ್ತು ಸ್ನೇಹಿತರು ತಮ್ಮ ಮೇಲಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.