LATEST NEWS
ಪಹಲ್ಗಾಮ್ ದಾಳಿ ಕುರಿತಂತೆ ಯಾವುದೇ ರೀತಿಯ ತಟಸ್ಥ ತನಿಖೆಗೆ ಸಿದ್ಧ – ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್

ಇಸ್ಲಾಮಾಬಾದ್ ಎಪ್ರಿಲ್ 26: ಕಾಶ್ಮೀರ ಕಣಿವೆಯ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಬಳಿಕ ಭಾರತದ ರಾಜತಾಂತ್ರಿಕ ನಡೆಗೆ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಇಸ್ಲಾಮಾಬಾದ್ ಈ ದಾಳಿಯ ಬಗ್ಗೆ “ತಟಸ್ಥ ತನಿಖೆಗೆ” ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ನ ನಲ್ಲಿ 26 ಮಂದಿ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿ ಬಳಿಕ ಕೇಂದ್ರ ಸರಕಾರ ಪಾಕಿಸ್ತಾನದ ವಿರುದ್ದ ರಾಜತಾಂತ್ರಿಕ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಪಾಕಿಸ್ತಾನ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ಭಾರತದ, ಸಿಂಧೂ ನದಿಯ ನೀರನ್ನು ನಿಲ್ಲಿಸಿದೆ. ಸದ್ಯ ಇದು ಪಾಕಿಸ್ತಾನದ ಸಂಕಷ್ಟಕ್ಕೆ ಕಾರಣವಾಗಿದೆ.

ಸದ್ಯ ಪಾಕಿಸ್ತಾನದ ಪ್ರಧಾನಿ 26 ಜನರ ಸಾವಿಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಅಬೋಟಾಬಾದ್‌ನ ಮಿಲಿಟರಿ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ಭಾರತದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪಾಕಿಸ್ತಾನವು ಯಾವುದೇ ತಟಸ್ಥ, ಪಾರದರ್ಶಕ ತನಿಖೆಯಲ್ಲಿ ಭಾಗವಹಿಸಲು ಮುಕ್ತವಾಗಿದೆ ಎಂದು ಹೇಳಿದ್ದಾರೆ. ಸಿಂಧೂ ಜಲ ಒಪ್ಪಂದದಡಿಯಲ್ಲಿ ಪಾಕಿಸ್ತಾನಕ್ಕೆ ಸೇರಿದ ನೀರಿನ ಹರಿವನ್ನು ನಿಲ್ಲಿಸುವ, ಕಡಿಮೆ ಮಾಡುವ, ತಿರುಗಿಸುವ ಯಾವುದೇ ಪ್ರಯತ್ನಕ್ಕೆ ಸಂಪೂರ್ಣ ಬಲ ಮತ್ತು ಶಕ್ತಿಯಿಂದ ಪ್ರತಿಕ್ರಿಯಿಸಲಾಗುವುದು” ಎಂದು ಅವರು ಭಾರತಕ್ಕೆ ಎಚ್ಚರಿಸಿದ್ದಾರೆ.