Connect with us

    LATEST NEWS

    ಹೆರಿಗೆ ಸಂದರ್ಭದಲ್ಲಿ ಮಗುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!

    ಪಾಕಿಸ್ತಾನ : ಹೆರಿಗೆ ಸಂದರ್ಭ ವೈದ್ಯರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ತಾರ್ಪಾರ್ಕರ್ ಜಿಲ್ಲೆಯ ಗ್ರಾಮದ ಭೀಲ್ ಹಿಂದೂ ಮಹಿಳೆ, ಮೊದಲು ತನ್ನ ಪ್ರದೇಶದಲ್ಲಿನ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ಆದರೆ ಮಹಿಳಾ ಸ್ತ್ರೀರೋಗತಜ್ಞರು ಲಭ್ಯವಿರಲಿಲ್ಲ. ಆದ ಕಾರಣ ಯಾವುದೇ ಅನುಭವವಿಲ್ಲದ ಆರ್‌ಎಚ್‌ಸಿ ಸಿಬ್ಬಂದಿ ಶಸ್ತ್ರಚಿಕಿತ್ಸೆ ನಡೆಸಿ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿದ್ದಾರೆ.

    ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾದ ಕೂಡಲೇ ಆಕೆಯನ್ನು ಮಿಥಿಯದ ಆಸ್ಪತ್ರೆಯೊಂದಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.ಆದರೆ ಮಗುವಿನ ತಲೆ ಒಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ತಾಯಿಯ ಗರ್ಭಕೋಶ ನಾಶವಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಯ ಮೂಲಕ ಮಗುವಿನ ತಲೆಯನ್ನು ಹೊರತೆಗೆದು ಆಕೆಯ ಜೀವವನ್ನು ಉಳಿಸಲಾಯಿತು ಎಂದು ವೈದ್ಯರು ಹೇಳಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *