LATEST NEWS
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪದಚ್ಯುತಿ …!!

ಲಾಹೋರ್ : ಕೊನೆಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಮ್ರಾನ್ ಖಾನ್ ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಮಂಡನೆಯಾದ ಅವಿಶ್ವಾಸ ನಿರ್ಣಯದ ನಿರ್ಣಾಯಕ ಸಂಸತ್ ಅಧಿವೇಶನದಲ್ಲಿ ಪರಾಭವಗೊಂಡಿದ್ದಾರೆ.
ಶನಿವಾರ ಮಧ್ಯರಾತ್ರಿಯವರೆಗೆ ನಡೆದ ನಾಟಕಗಳ ನಡುವೆ ಪಾಕಿಸ್ತಾನದ ಸಂಸತ್ತು ‘ನ್ಯಾಷನಲ್ ಅಸೆಂಬ್ಲಿ’ಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿಯೊಬ್ಬರು ಅಧಿಕಾರದಿಂದ ಪದಚ್ಯುತಿಗೊಂಡಿದ್ದಾರೆ. ಇದುವರೆಗೆ ಯಾವೊಬ್ಬ ಪ್ರಧಾನಿಯೂ 5 ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿಲ್ಲ.

ಪಾಕಿಸ್ತಾನ ಸಂಸತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಅಂದು ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ‘ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್’ ಪಕ್ಷದ ಅಧ್ಯಕ್ಷ ಶಹಬಾಝ್ ಶರೀಪ್ ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.