Connect with us

    LATEST NEWS

    ಪ್ರೀತಿಗಾಗಿ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ ಪಾಕಿಸ್ತಾನದ ಸೀಮಾ ಹೈದರ್ : ಎಟಿಎಸ್ ನಿಂದ ವಿಚಾರಣೆ

    ನೋಯ್ಡಾ, ಜುಲೈ 18: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಬಾಯ್‌ಫ್ರೆಂಡ್ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳದ(ಎಟಿಎಸ್) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

    ನಿನ್ನೆ ರಾತ್ರಿವರೆಗೂ ವಿಚಾರಣೆ ಮುಂದುವರಿದಿತ್ತು. ಸಚಿನ್ ಮತ್ತು ಆತನ ತಂದೆ ನೇತ್ರಪಾಲ್ ಸಿಂಗ್ ಅವರನ್ನೂ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಸೀಮಾ ಹೈದರ್‌ ಅವರನ್ನು 72 ಗಂಟೆಗಳ ಒಳಗೆ ದೇಶದಿಂದ ಹೊರಹಾಕದಿದ್ದರೆ ಗ್ರೇಟರ್ ನೋಯ್ಡಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಬಲಪಂಥೀಯ ಗುಂಪು ಬೆದರಿಕೆ ಹಾಕಿತ್ತು.

    ‘ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರದಲ್ಲಿ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯ ನಂತರ ಅವರನ್ನು ಬಂಧಿಸಬಹುದು ಅಥವಾ ಬಂಧಿಸದಿರಬಹುದು’ಎಂದು ಯುಪಿ ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸ್ಥಳೀಯ ಪೊಲೀಸರು ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು, ಇನ್ನಷ್ಟೆ ಆರೋಪಪಟ್ಟಿ ಸಲ್ಲಿಸಬೇಕಾಗಿದೆ ಎಂದು ಅಧಿಕಾರಿ ಹೇಳಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *