LATEST NEWS
ಪಾಲಕ್ಕಾಡ್ – ಮಳೆಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿ ಹೊಡೆದ ಕಾರು – ಐವರು ಸಾವು
ಪಾಲಕ್ಕಾಡ್ ಅಕ್ಟೋಬರ್ 23: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಕೇರಳದ ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪನಕಾವು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ಕೊಯಮತ್ತೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು.