LATEST NEWS
ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
ಹಿರಿಯಡಕ ಜನವರಿ 1: ಸಿಬ್ಬಂದಿಗಳು ಕೆಲಸಕ್ಕೆ ರಾಜೀನಾಮೆ ನೀಡಿದ ಕಾರಣ ಉಡುಪಿ ತಾಲೂಕು 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ವರ್ಷದ ಮೊದಲ ದಿನವೇ ಬಾಗಿಲು ಮುಚ್ಚಿದೆ.
ಡಿ.ಸೆಂಬರ್ 19 ರಂದು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ ದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು ಆರೋಗ್ಯದ ದೃಷ್ಟಿಯಿಂದ ರಾಜೀನಾಮೆಯನ್ನು ನೀಡುತ್ತಿದ್ದೇವೆ ಎಂದು ಪತ್ರವನ್ನು ಸಲ್ಲಿಸಿದ್ದರು. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮೇಲಾಧಿಕಾರಿಗಳಿಗೆ ಪತ್ರ ಮೂಲಕ ಮಾಹಿತಿ ನೀಡಿದ್ದರು ಯಾವುದೇ ಕ್ರಮವನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಗ್ರಾಮ ಪಂಚಾಯತ್ ಕಛೇರಿಗೆ ಸಿಬ್ಬಂದಿಗಳು ಹಾಜರಾಗಿಲ್ಲ.
ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಛೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ. ಯಾವುದೇ ಮಾಹಿತಿ ನೀಡದೆ ಕಛೇರಿ ಬಾಗಿಲು ತೆರೆಯದೆ ಇರುವುದಕ್ಕೆ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.