LATEST NEWS
ಪಾಣೆಮಂಗಳೂರು ಸೇತುವೆ ಬಳಿ ಈಜಾಟ ಸೂಕ್ತ ಕ್ರಮಕ್ಕೆ ಆಗ್ರಹ
ಪಾಣೆಮಂಗಳೂರು ಸೇತುವೆ ಬಳಿ ಈಜಾಟ ಸೂಕ್ತ ಕ್ರಮಕ್ಕೆ ಆಗ್ರಹ
ಮಂಗಳೂರು ಜುಲೈ 8: ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಂದು ಕೊಂಚ ರಿಲೀಫ್ ದೊರೆತಿದೆ. ಇಂದು ಮುಂಜಾನೆಯಿಂದ ಮಳೆಯ ಪ್ರಮಾಣ ಕೊಂಚ ತಗ್ಗಿದೆ.
ಮಳೆಯು ಸುರಿಯುವುದು ತಗ್ಗಿದ್ದರೂ, ನದಿ ಹಾಗೂ ತೊರೆಗಳಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಗ್ಗು ಪ್ರದೇಶಗಳಲ್ಲಿ ಇಂದೂ ಕೂಡಾ ನೀರು ತುಂಬಿಕೊಂಡಿದೆ.
ಈ ನಡುವೆ ನಿನ್ನೆ ಮಳೆಯಿಂದಾಗಿ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದ ಪುತ್ತೂರಿನ ಹೆಬ್ಬಾರು ಬೈಲಿನ ಮನೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರದ ವತಿಯಿಂದ ಶೀಘ್ರ ಪರಿಹಾರ ನೀಡುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಕೂಡಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮೃತರ ಕುಟುಂಬಕ್ಕೆ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ.
ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಮಳೆ ನೀರಿನ ಪ್ರವಾಹದಲ್ಲಿ ಈಜಾಡುವ ಸಾಹಸಕ್ಕೆ ಕೈಹಾಕಿರುವ ಘಟನೆಯು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸೇತುವೆ ಬಳಿ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
VIDEO