Connect with us

    BANTWAL

    ಪಾಣೆ ಮಂಗಳೂರು – ಬೈಕ್ ಮತ್ತು ರಿಕ್ಷಾ ಅಪಘಾತದ ಸಿಸಿಟಿವಿ ವಿಡಿಯೋ

    ಬಂಟ್ವಾಳ ಮೇ 21: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟು ಸಾವನಪ್ಪಿದ ಘಟನೆ ನಿನ್ನೆ ಪಾಣೆಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಿಸಿಟಿವಿ ವಿಡಿಯೋ ದೊರೆತಿದ್ದು, ಸಣ್ಣ ತಪ್ಪಿಗೆ ಒಂದು ಜೀವ ಬಲಿಯಾಗಿದೆ.


    ಅಪಘಾತದಲ್ಲಿ ಮೃತರನ್ನು ಸಜೀಪ ನಿವಾಸಿ ಅಲ್ತಾಫ್ (18) ಎಂದು ಗುರುತಿಸಲಾಗಿದೆ. ಬಿ.ಸಿ ರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತ ರಭಸಕ್ಕೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ಪಲ್ಟಿಯಾಗುವ ಸಂದರ್ಭದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

    ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು. ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply