Connect with us

  LATEST NEWS

  ಶರತ್ ಶೆಟ್ಟಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋದ ಕುಟುಂಬ….ಅಭಯ ನೀಡಿದ ಪಂಜುರ್ಲಿ ದೈವ

  ಉಡುಪಿ ಮಾರ್ಚ್ 24: ಅಂಡರ್ವರ್ಲ್ಡ್ ಗ್ಯಾಂಗ್​ನಿಂದ ಶರತ್ ಶೆಟ್ಟಿ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 23 ರಂದು ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಶರತ್ ಶೆಟ್ಟಿ ಕುಟುಂಬಸ್ಥರು ಕೊಲೆಗೆ ನ್ಯಾಯ ಕೇಳಿದ್ದು ಈ ವೇಳೆ ಶರತ್ ಶೆಟ್ಟಿ ಯಾವ ರೀತಿ ಸಾಯುವಂತಾಯಿತು ಅದೇ ರೀತಿ ಅವರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ.


  ಕಾಪು ತಾಲೂಕಿನ ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳುಗಳೇ ಕಳೆದಿವೆ. ಪಾಂಗಾಳ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದರು. ಇವರು ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು, ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


  ಇದೀಗ ಪಾಂಗಾಳ ಶರತ್ ವಿ ಶೆಟ್ಟಿ ಕುಟುಂಬಸ್ಥರು ದೈವದ ಮೊರೆ ಹೋಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು ಎಂದು ನಿನ್ನೆ ರಾತ್ರಿ ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿ ನೇಮೋತ್ಸವವನ್ನು ಆಯೋಜಿಸಲಾಗಿತ್ತು. ಈ ವೇಳೆ ಶರತ್ ಶೆಟ್ಟಿ ಕೊಲೆ ಆರೋಪಿಗಳು ಪಾತಾಳದಲ್ಲಿ ಅಡಗಿ ಕುಳಿತರೂ ಹುಡುಕುತ್ತೇನೆ ಎಂದು ಪಂಜುರ್ಲಿ ದೈವವು ಅಭಯ ನುಡಿದಿದೆ.

  Share Information
  Advertisement
  Click to comment

  You must be logged in to post a comment Login

  Leave a Reply