LATEST NEWS
ಮಂಗಳೂರು – ಪ್ಯಾರಾಮೆಡಿಕಲ್ ಓದುತ್ತಿದ್ದ ಯುವಕ ನಾಪತ್ತೆ

ಮಂಗಳೂರು ಫೆಬ್ರವರಿ 18: ಪ್ಯಾರಾಮೆಡಿಕಲ್ ಓದುತ್ತಿದ್ದ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಲ್ಬಡ (19) ಎಂಬ ಯುವರ ಫೆಬ್ರವರಿ 13ರಂದು ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ನಾಪತ್ತೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಇಂಗ್ಲಿಷ್ ಭಾಷೆ ಬಲ್ಲವರಾಗಿದ್ದಾರೆ. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಬಜಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
