ಬೆಂಗಳೂರು,ಫೆಬ್ರವರಿ 24 : ರಾಜ್ಯದಲ್ಲಿ ರಂಝಾನ್ ಮತ್ತು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸೂಚನೆಯನ್ನು ನೀಡಿದ್ದಾರೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಯಾರೂ ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿಕೊಂಡರು.

ರಂಜಾನ್ ಮತ್ತು ಹೋಳಿ ಹಬ್ಬಗಳ ಆಚರಣೆಯ ವೇಳೆ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡಲು ಯತ್ನಿಸುವವರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಹಬ್ಬ ಇರುವುದು ಸಂತೋಷದಿಂದ ಆಚರಣೆ ಮಾಡಲು.ಅಂತಹ ಸಂದರ್ಭಗಳಲ್ಲಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದರೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಖಡಕ್ ಎಚ್ಚರಿಕೆ ನೀಡಿದರು. ಈ ಕುರಿತು ಈಗಾಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.