LATEST NEWS
ನಾಳೆ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮ

ಉಡುಪಿ, ಜನವರಿ 26: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜನವರಿ 27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ತಾಲೂಕು ಬೈಲೂರು ಉಮಿಕಲ್ ಬೆಟ್ಟ ಇಲ್ಲಿನ ಪರಶುರಾಮ ಥೀಂ ಪಾರ್ಕ್ನಲ್ಲಿ ನಡೆಯಲಿದೆ.
ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತç ಇಲಾಖೆಯ ಸಚಿವ ಆನಂದ್ ಸಿಂಗ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮತ್ತಿತರರು ಭಾಗವಹಿಸಲಿರುವರು.