Connect with us

LATEST NEWS

ಪರ್ತಗಾಳಿ ಶ್ರೀ ವಿದ್ಯಾಧಿರಾಜತೀರ್ಥ ಸ್ವಾಮಿಗಳು ಅಸ್ತಂಗತ

ಮಂಗಳೂರು: ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ.

1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀ ಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ ಮಠವನ್ನು, ಮಠದ ಆಡಳಿತದಲ್ಲಿರುವ ದೇವಾಲಯಗಳನ್ನು, ಮಠದ ಲಕ್ಷಾಂತರ ಶಿಷ್ಯರನ್ನು ಧಾರ್ಮಿಕವಾಗಿ ಮುನ್ನಡೆಸಿ ಅಪಾರ ಪ್ರಗತಿಗೆ ಕಾರಣರಾಗಿದ್ದ ಶ್ರೀ ಗಳು ಹೃದಯಾಘಾ ತದಿಂದ ತಮ್ಮ 76ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.