KARNATAKA
ಪ್ರೀತಿಗೆ ಪೋಷಕರ ವಿರೋಧ, ನೈಸ್ ರಸ್ತೆ ಬಳಿ ಕೆರೆಗೆ ಹಾರಿ ಜೀವಾಂತ್ಯ ಮಾಡಿದ ಪ್ರೇಮಿಗಳು..!

ಬೆಂಗಳೂರು: ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.
ಕಳೆದ ಜುಲೈ 1ರಂದು ತಲಘಟ್ಟಪುರ ಸಮೀಪದ ಅಂಜನಾಪುರದಲ್ಲಿ ವಾಸವಿದ್ದ ವಿದ್ಯಾರ್ಥಿನಿ ಹಾಗೂ ಕೋಣನಕುಂಟೆ ನಿವಾಸಿ ಶ್ರೀಕಾಂತ್ ನಾಪತ್ತೆಯಾಗಿದ್ದರು. ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದರು. ಇಂದು ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಇಬ್ಬರು ಯುವ ಪ್ರೇಮಿಗಳ ಶವ ತೇಲಿಕೊಂಡು ಬಂದಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಈ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ. ʼಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್ ತಿಳಿಸಿದ್ದಾರೆ.
