Connect with us

    KARNATAKA

    ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು – ಸಿಬಿಐ

    ಉತ್ತರ ಕನ್ನಡ ಅಕ್ಟೋಬರ್ 04: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ.
    2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.


    ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ವರದಿ ಸಲ್ಲಿಸಿದೆ.

    ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಪರೇಶ್‌ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದಿದ್ದಾರೆ. ‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *