Connect with us

    LATEST NEWS

    ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚಿನ ಪದಕಕ್ಕೆ ಮುತ್ತಿಟ್ಟ ಶೂಟರ್ ಮನು ಭಾಕರ್

    ಪ್ಯಾರಿಸ್ ಜುಲೈ 28: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತ ತನ್ನ ಪದಕದ ಬೇಟೆ ಆರಂಭಿಸಿದೆ. ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.


    10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಮನು ಭಾಕರ್ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು ಕಂಚಿನ ಪದಕ ಗೆದ್ದಿದ್ದಾರೆ. ಇನ್ನು ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.

    10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಹರಿಯಾಣ ಮೂಲದ ಮನು ಭಾಕರ್ ಚೊಚ್ಚಲ ಪದಕ ಗೆದ್ದಿದ್ದಾರೆ. ಇನ್ನು ಒಲಿಂಪಿಕ್ಸ್ ನಲ್ಲಿ ಮೊದಲ ಪದಕ ಗೆದ್ದ ಭಾರತೀಯ ಮಹಿಳೆ ಎಂಬ ಖ್ಯಾತಿಗೂ ಮನು ಭಾಕರ್ ಭಾಜನರಾಗಿದ್ದಾರೆ. ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದಿದೆ. ಕಂಚಿನ ಪದಕದೊಂದಿಗೆ ಭಾರತ ಪದಕ ಬೇಟೆ ಮುಂದೂವರೆಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply