Connect with us

LATEST NEWS

ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ – ಪ್ರಧಾನಿ ನರೇಂದ್ರ ಮೋದಿ

ಮುಂಬೈ ಮೇ 07:ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಟೈಮ್ಸ್ ನೌ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೋದಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ. ರಾಜಕೀಯ ಲಾಭ ಪಡೆದುಕೊಳ್ಳಲು ಆರೋಪಿ ದೇಶ ಬಿಟ್ಟು ಹೋಗುವವರೆಗೂ ಸುಮ್ಮನಿದ್ದು, ವ್ಯರ್ಥ ಕಾಲಹರಣ ಮಾಡಿದೆ,” ಎಂದು ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜ್ವಲ್ ದೇಶದಿಂದ ಹೊರಹೋಗಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ.ಇದು ಕಾನೂನು ಸುವವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕ್ರಮ ವಹಿಸುವ ಜವಾಬ್ಧಾರಿಯು ಸರ್ಕಾರದ ಮೇಲಿದೆ ಎಂದು ಹೇಳಿದರು.
ಸಹಸ್ರಾರು ವಿಡಿಯೋಗಳು ಇದೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರಸ್ಸಿನ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಅವಧಿಗೆ ಸೇರಿದೆ ಎನ್ನುವುದು ಗೊತ್ತಾಗುತ್ತಿದೆ. ಅವರು ಅಧಿಕಾರದಲ್ಲಿದ್ದಾಗ ವಿಡಿಯೋಗಳನ್ನ ಸಂಗ್ರಹಿಸಿದ್ದರು. ಒಕ್ಕಲಿಗರು ಮತದಾನ ಹಕ್ಕನ್ನು ಚಲಾಯಿಸಿದ ನಂತರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ. ಪ್ರಜ್ವಲ್ ಅವರನ್ನು ದೇಶದಿಂದ ಹೊರಗೆ ಕಳುಹಿಸಿದ ಮೇಲೆಯೇ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ಬೆಳವಣಿಗೆ ಬಹಳ ಅನುಮಾನಾಸ್ಪದ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ ಜತೆ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ವೇಳೆಯೇ ಇಂಥ ಕೃತ್ಯಗಳು ನಡೆದಿವೆ. ಕ್ರಮ ಜರುಗಿಸದೆ ಸುಮ್ಮನಿದ್ದ ಸರ್ಕಾರ, ಚುನಾವಣೆ ಸಮಯದಲ್ಲಿ ಒಕ್ಕಲಿಗರ ಮತಗಳ ಮೇಲೆ ಕಣ್ಣಿಟ್ಟು ಮತದಾನದ ಸಮಯದಲ್ಲಿ ವಿಡಿಯೋ ಬಿಡುಗಡೆ ಮಾಡಲಾಗಿದೆ. ವಿಡಿಯೋ ಪ್ರಕರಣದಲ್ಲಿ ಎಲ್ಲವೂ ಸಂಶಯಕ್ಕೆ ದಾರಿ ಮಾಡಿಕೊಟ್ಟಿದೆ” ಎಂದು ಮೋದಿ ಆರೋಪಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *