LATEST NEWS
ಕದ್ರಿ ಯುದ್ದ ಸ್ಮಾರಕದ ಬಳಿ ಬೆಂಕಿಗಾಹುತಿಯಾದ ಕಾರು
ಮಂಗಳೂರು ನವೆಂಬರ್ 15: ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ತಲಪಾಡಿಯ ಸೆಕೆಂಡ್ ಸೇಲ್ ಮಳಿಗೆಯಿಂದ ರಿಟ್ಜ್ ಕಾರನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು. ಕದ್ರಿ ಪೊಲೀಸ್ ಠಾಣೆಯ ಮುಂಭಾಗ ನಿಲ್ಲಿಸಿ ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಕಾರನ್ನು ಸ್ಟಾರ್ಟ್ ಮಾಡಿದ್ದಾರೆ. ಆಗ ಕಾರಿನ ಮುಂಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಕೂಡಲೇ ಕಾರಿನಿಂದ ಹೊರಗೆ ಬಂದಿದ್ದಾರೆ. ನೋಡ-ನೋಡುತ್ತಿದ್ದಂತೆಯೇ ಬೆಂಕಿ ಇಡೀ ಕಾರನ್ನು ಆವರಿಸಿತ್ತು. ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚಣೆ ನಡೆಸಿ ಬೆಂಕಿ ನಂದಿಸಿದರು.