LATEST NEWS
ಸುರತ್ಕಲ್ – ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ

ಸುರತ್ಕಲ್ ಫೆಬ್ರವರಿ 14: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೊ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದಿದೆ. ಘಟನೆಯಿಂದ ಎರಡು ಆಟೊ ರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
