Connect with us

  KARNATAKA

  ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಪರೋಲ್ ಅರ್ಜಿ ತಿರಸ್ಕೃತ..!

  ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿಯ ಪರೋಲ್ ಅರ್ಜಿಯನ್ನು ಮಾನ್ಯ ನ್ಯಾಯಾಲಯ ತಿರಸ್ಕೃರಿಸಿದೆ.

  ನೇಜಾರಿನಲ್ಲಿ ತಾಯಿ, ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಫೆಬ್ರವರಿ 1ರಂದು ನಿಧನರಾದ ಸಹೋದರನ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡಬೇಕು ಎಂದು ಆರೋಪಿ ನ್ಯಾಯಾಲಯಕ್ಕೆ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದ. ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಕೂಡ ಇರುತ್ತದೆ ಎಂದು ವಾದ ಮಂಡಿಸಿದ್ದರು. ಈ ವಾದ ಪುರಸ್ಕರಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಚೌಗುಲೆ ಸಲ್ಲಿಸಿದ್ದ ಪರೋಲ್ ಅರ್ಜಿಯನ್ನು ತಿರಸ್ಕರಿಸಿತು.

   

   

  Share Information
  Advertisement
  Click to comment

  You must be logged in to post a comment Login

  Leave a Reply