ಪುತ್ತೂರು ಅಕ್ಟೋಬರ್ 02: ಪರ್ಪುಂಜ ಅಬ್ರಾಡ್ ಹಾಲ್ ಬಳಿಯಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನಪ್ಪಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.


ಮೃತರನ್ನು ಅಪಘಾತದಲ್ಲಿ ಬನ್ನೂರು ನಿವಾಸಿ ಹನೀಫ್ ಅವರ ಮಗಳು ಶಾಝ್ವಾ ಫಾತಿಮಾ (4 ವರ್ಷ 6 ತಿಂಗಳು) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ಬೊಳುವಾರು ಕಾಪಿಕಾಡ್ ನಿವಾಸಿ ಝುಲೈಕಾ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬನ್ನೂರು ನಿವಾಸಿ ಹನೀಫ್ ಅವರು ನೀಡಿದ ದೂರಿನಲ್ಲಿ, ಸುಮಾರು 4.15ಕ್ಕೆ ತಮ್ಮ ಕುಟುಂಬದವರಾದ ಪತ್ನಿ, ಅತ್ತೆ, ಭಾವನ ಹೆಂಡತಿ ಹಾಗೂ ಮೂವರು ಮಕ್ಕಳೊಂದಿಗೆ KA-21-C-3491 ಆಟೋ ರಿಕ್ಷಾದಲ್ಲಿ ಕುಟುಂಬದೊಂದಿಗೆ ಬೊಳುವಾರಿನಿಂದ ಪುತ್ತೂರಿನತ್ತ ಬರುತ್ತಿದ್ದ ಸಂದರ್ಭದಲ್ಲಿ ಎದುರುನಿಂದ ಬಂದ TN-72-BL-1759 ನಂಬರಿನ ಕಾರು ಚಾಲಕ ತಮಿಳುನಾಡು ಮೂಲದ ಲಕ್ಷ್ಮಿಬದಿರಾಜು ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ತಪ್ಪು ಬದಿಯಲ್ಲಿ ಕಾರು ಓಡಿಸಿ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾರೆ.

ಈ ಘಟನೆಯಲ್ಲಿ ಹನೀಫ್ ಅವರ ಮಗಳು ಶಾಝ್ವಾ ಫಾತಿಮಾ (4ವರ್ಷ 6ತಿಂಗಳು) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಮಂಗಳೂರು ಕೆಎಂಸಿ ಆಸ್ಪತ್ರಗೆ ದಾಖಲಿಸಲಾಗಿದ್ದ ಹನೀಫ್ ಅವರ ಪತ್ನಿಯ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share Information