Connect with us

LATEST NEWS

ಅತ್ಯಂತ ಹಿಂದುಳಿದ ಜಾತಿಯ ಭಜಪಾ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ: ಸಂಸದ ಬ್ರಿಜೇಶ್ ಚೌಟ

ಮಂಗಳೂರು:  ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು.

ಸಂಸದರಾದ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು,ಚುನಾವಣಾ ಜಿಲ್ಲಾ ಸಂಚಾಲಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಬಂಟ್ವಾಳ ಚುನಾವಣಾ ಪ್ರಚಾರದ ಸಂಚಾಲಕರಾದ ದೇವದಾಸ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮೀ ಗಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಸದರಾದ ಬ್ರಿಜೇಶ್ ಚೌಟ ಅವರು ಮಾತನಾಡುತ್ತಾ,ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಭಜಪಾ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ, ನಾವೆಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು.

ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥವಾದ ಅಭ್ಯರ್ಥಿಯನ್ನೇ ಬಿಜೆಪಿ ಇಂದು ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ ಹಾಗೂ ನಾವೆಲ್ಲರೂ ಸೇರಿ ಕಿಶೋರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸೋಣ ಎಂದರು.
ಹಾಗೂ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡುತ್ತಾ, ಬಾಲ್ಯದಿಂದಲೇ ಸ್ವಯಂ ಸೇವಕ ಸಂಘ, ಎಬಿವಿಪಿ, ಭರಂಗದಳ, ಯುವ ಮೋರ್ಚಾದ ದ ಮೂಲಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ನನಗೆ ಪಕ್ಷ ಇಂದು ಬಹುದೊಡ್ಡ ಜವಾಬ್ದಾರಿಯನ್ನು ನೀಡಿದೆ,ನಿಮ್ಮೆಲ್ಲರ ಸಹಕಾರದಿಂದ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂಬ ಆತ್ಮ ವಿಶ್ವಾಸವಿದೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *