LATEST NEWS
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ
ಇಸ್ಲಾಮಾಬಾದ್ ಫೆಬ್ರವರಿ 05: ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದುಬೈನಲ್ಲಿ ನಿಧನಹೊಂದಿದ್ದಾರೆ.
ಪಾಕಿಸ್ತಾನದ ಮಾಜಿ ಅಧ್ಯಕ್ಷರಾಗಿರುವ ಮುಷರಫ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ದುಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಪರ್ವೇಜ್ ಅವರ ಮೇಲೆ 2007ರಲ್ಲಿ ಪಾಕಿಸ್ತಾನದಲ್ಲಿ ಸಾಂವಿಧಾನಿಕ ತುರ್ತು ಪರಿಸ್ಥಿತಿ ಬಲವಂತವಾಗಿ ಹೇರಿಕೆ, ದೇಶದ್ರೋಹ ಎಸಗಿದ ಆರೋಪವಿತ್ತು. ಈ ಸಂಬಂಧ ನವೆಂಬರ್ 19ರಂದು ವಿಚಾರಣೆ ನಂತರದಲ್ಲಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಲಾಗಿತ್ತು. ಅದರಂತೆ ಡಿಸೆಂಬರ್ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿತ್ತು.