ಬೆಂಗಳೂರು ಮೇ 20: ತಮ್ಮ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ ಮತ್ತು ಪವಿತ್ರಾ ಗೌಡ ಇಂದು ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಪವಿತ್ರಾ ಗೌಡ ದರ್ಶನ್ ನಿಂದ ಮೊಬೈಲ್ ನಂಬರ್ ಪಡೆದಿದ್ದಾರೆ ಎಂದು ಹೇಳಲಾಗಿದೆ.


ಇಂದು ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿ ನಡೆದಿದೆ. ಈ ವೇಳೆ ಒಂದಷ್ಟು ಅಪರೂಪದ ಘಟನೆಗಳು ನಡೆದವು. ಕೋರ್ಟ್​ ಹಾಲ್​ನಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಕೋರ್ಟ್​ನಲ್ಲಿ ಅಕ್ಕ-ಪಕ್ಕದಲ್ಲಿ ನಿಂತಿದ್ದರು. ಅಷ್ಟೇ ಅಲ್ಲ, ಕೋರ್ಟ್​ನಿಂದ ಹೊರ ಬರುವಾಗ ದರ್ಶನ್​ ಕೈನ ಪವಿತ್ರಾ ಹಿಡಿದುಕೊಂಡಿದ್ದರು.

ಕೋರ್ಟ್‌ನಲ್ಲಿ ವಿಚಾರಣೆ ಮುಗಿಸಿ ಲಿಫ್ಟ್‌ನಲ್ಲಿ ಬರುವಾಗ ಇಬ್ಬರೂ ಮುಖಾಮುಖಿಯಾದರು. ಈ ವೇಳೆ ಫೋನ್ ನಂಬರ್ ಕೊಡುವಂತೆ ಪವಿತ್ರಾಗೌಡ ಹಠ ಮಾಡಿದರು. ನಂಬರ್ ಬೇಕೇ ಬೇಕು ಎಂದು ದುಂಬಾಲು ಬಿದ್ದರು. ಕೈಹಿಡಿದು ಫೋನ್ ನಂಬರ್ ನೀಡುವಂತೆ ಒತ್ತಾಯಿಸಿದರು. ಕೊನೆಗೆ ತನ್ನ ಫೋನ್ ನಂಬರ್ ಅನ್ನು ದರ್ಶನ್, ಪವಿತ್ರಾ ಮೊಬೈಲ್ ಪಡೆದುಕೊಂಡು ಡಯಲ್ ಮಾಡಿಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ಬಳಿಕ ದರ್ಶನ್ ಮತ್ತು ಪವಿತ್ರಾ ಗೌಡ ದೂರ ಆಗಿದ್ದರು. ಪವಿತ್ರಾ ಜೊತೆಗೆ ಸ್ವತಃ ದರ್ಶನ್ ಅಂತರ ಕಾಯ್ದುಕೊಂಡಿದ್ದರು. ಈ ಹಿಂದೆ ಕೋರ್ಟ್ ಆಗಿಮಿಸಿದ್ದಾಗ ಪವಿತ್ರಾ ಜೊತೆ ದರ್ಶನ್ ಮಾತನಾಡುತ್ತಿರಲಿಲ್ಲ.

ಸದ್ಯ ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿದ್ದಾರೆ. ಪವಿತ್ರಾ ಗೌಡ ಸ್ವಂತ ಬಿಸಿನೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಈಚೆಗಷ್ಟೇ ದರ್ಶನ್ ಮತ್ತು ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.

Share Information