ಮಂಗಳೂರು, ಜೂ.27: ಬಕ್ರೀದ್ ಹಿನ್ನಲೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ ಆಶ್ರಯದಲ್ಲಿ ಶಾಂತಿ ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಸಂಚಾರ ಸುವ್ಯವಸ್ಥೆ ಹಾಗೂ ಮಾದಕ ವಸ್ತುಗಳ ನಿಯಂತ್ರದ ಕುರಿತಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಮುಖಂಡರು ಪೊಲೀಸ್ ಇಲಾಖೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ.